ADVERTISEMENT

‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮಾರ್ಚ್ 2022, 7:06 IST
Last Updated 18 ಮಾರ್ಚ್ 2022, 7:06 IST
ವಿವೇಕ್ ಅಗ್ನಿಹೋತ್ರಿ - ಐಎಎನ್‌ಎಸ್ ಚಿತ್ರ
ವಿವೇಕ್ ಅಗ್ನಿಹೋತ್ರಿ - ಐಎಎನ್‌ಎಸ್ ಚಿತ್ರ   

ನವದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಕೇಂದ್ರ ಸರ್ಕಾರ ‘ವೈ’ ಕೆಟಗರಿ ಭದ್ರತೆ ನೀಡಿದೆ ಎಂದು ವರದಿಯಾಗಿದೆ.

ವಿವೇಕ್ ಅಗ್ನಿಹೋತ್ರಿ ಅವರಿಗೆ ‘ವೈ’ ಕೆಟಗರಿ ಭದ್ರತೆ ನೀಡಿರುವ ಬಗ್ಗೆ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಳೆದ ವಾರ ತೆರೆಕಂಡಿದ್ದು, ದೇಶದಾದ್ಯಂತ ಸಾಕಷ್ಟು ಸುದ್ದಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.