ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ದುಬೈ ಉದ್ಯಮಿ ರಾಜೀವ್ ಸಕ್ಸೆನಾ ಅವರನ್ನು ನಾಲ್ಕು ದಿನಗಳ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.
ದೆಹಲಿ ನ್ಯಾಯಾಲಯದ ಮುಂದೆ ಗುರುವಾರ ಸಕ್ಸೆನಾ ಅವರನ್ನು ಹಾಜರುಪಡಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿದ್ದರು. ಬುಧವಾರ ದುಬೈ ಅಧಿಕಾರಿಗಳು ಸಕ್ಸೆನಾ ಅವರನ್ನು ವಶಕ್ಕೆ ಪಡೆದು ಭಾರತಕ್ಕೆ ಗಡಿಪಾರು ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.