ADVERTISEMENT

ನ್ಯಾಯಾಂಗ ವಶಕ್ಕೆ ಕ್ರಿಶ್ಚಿಯನ್‌ ಮೈಕೆಲ್‌

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 20:25 IST
Last Updated 5 ಜನವರಿ 2019, 20:25 IST
ಕ್ರಿಶ್ಚಿಯನ್‌ ಮೈಕೆಲ್‌
ಕ್ರಿಶ್ಚಿಯನ್‌ ಮೈಕೆಲ್‌   

ನವದೆಹಲಿ:ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್‌ ಮಿಷೆಲ್‌ ಅವರನ್ನು ಫೆಬ್ರುವರಿ27ರ ವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

57 ವರ್ಷದ ಬ್ರಿಟಿಷ್‌ ದೇಶದ ಮಿಷೆಲ್‌ ಅವರನ್ನು ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಮುಂದೆ ಹಾಜರುಪಡಿಸಲಾಯಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ವಶಕ್ಕೆ ಒಪ್ಪಿಸುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದರು. ಅರ್ಜಿಯನ್ನು ಮಾನ್ಯಮಾಡಿದ ನ್ಯಾಯಾಧೀಶರು ಫೆಬ್ರುವರಿ 27ರ ವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು.

ADVERTISEMENT

ಗಣ್ಯರ ಬಳಕೆ ಹೆಲಿಕಾಪ್ಟರ್ ಖರೀದಿಯಲ್ಲಿ ಯುಪಿಎ ಅವಧಿಯಲ್ಲಿ ನಡೆದಿದೆ ಎನ್ನಲಾದ ₹3,600 ಕೋಟಿ ಮೊತ್ತದ ಹಗರಣದಲ್ಲಿ ಮಿಷೆಲ್‌ ಭಾರತಕ್ಕೆ ಬೇಕಾಗಿದ್ದರು. ಈ ಹೆಲಿಕಾಪ್ಟರ್‌ ಖರೀದಿಯಲ್ಲಿ ಮೈಕೆಲ್‌ ಸುಮಾರು ₹225 ಕೋಟಿ ಮೊತ್ತವನ್ನು ಮಿಷೆಲ್‌ ಲಂಚ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯವು 2016ರ ಜೂನ್‌ ತಿಂಗಳಲ್ಲಿ ದೋಷಾರೋಪ ಪಟ್ಟಿ ದಾಖಲಿಸಿತ್ತು.

ಕ್ರಿಶ್ಚಿಯನ್‌ ಅವರನ್ನು ಡಿಸೆಂಬರ್‌ 4ರಂದು ಸಂಯುಕ್ತ ಅರಬ್‌ ಒಕ್ಕೂಟದಲ್ಲಿ ಬಂಧಿಸಿ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.