ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಆರೋಪಿ ರಾಜೀವ್ ಸಕ್ಸೇನಾ ಅವರಿಗೆ ದೆಹಲಿಯ ನ್ಯಾಯಾಲಯ ಗುರುವಾರ ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ಮಾಡಿರುವ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ರಾಜೀವ್ ಅವರ ಆರೋಗ್ಯದ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್) ಸೂಚಿಸಿದ್ದಾರೆ.
ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸದ ಜಾರಿ ನಿರ್ದೇಶನಾಲಯವು ’ಏಮ್ಸ್ ಸಲ್ಲಿಸಿರುವ ವೈದ್ಯಕೀಯ ವರದಿ ವಿಸ್ತೃತವಾಗಿಲ್ಲ‘ಎಂದು ಬುಧವಾರ ಹೇಳಿತ್ತು.
ಹೃದ್ರೋಗ ಮತ್ತು ರಕ್ತದ ಕ್ಯಾನ್ಸರ್‌ನಿಂದ (ಲುಕೇಮಿಯಾ) ಬಳಲುತ್ತಿರುವುದರಿಂದ ಜಾಮೀನು ನೀಡಬೇಕು ಎಂದು ರಾಜೀವ್ ಅವರು ಅರ್ಜಿಯಲ್ಲಿ ಕೋರಿದ್ದರು.
ಪ್ರಕರಣದ ಮುಂದಿನ ವಿಚಾರಣೆ ಇದೇ 22ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.