ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿ ಕಾಪ್ಟರ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾ ವಣೆಗೆಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಅವರ ಸೋದರಳಿಯ ರಾತುಲ್ ಪುರಿ ಅವರ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಸಾಧ್ಯವಾಗಿಲ್ಲ.
ಶನಿವಾರ ಕಚೇರಿಗೆ ಬರುತ್ತಿದ್ದಂತೆ ಶೌಚಾಲಯಕ್ಕೆ ಹೋಗುವುದಾಗಿ ಅಧಿಕಾರಿಗಳಿಗೆ ತಿಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಬಳಿಕ, ಅಧಿಕಾರಿಗಳು ಮೊಬೈಲ್ ನಲ್ಲಿ ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ, ಮೊಬೈಲ್ ಸ್ವಿಚ್ಡ್‌ಆಫ್ ಆಗಿತ್ತು. ಕೆಲವು ಸಾಕ್ಷ್ಯಗಳ ಬಗ್ಗೆ ವಿಚಾರಣೆ ನಡೆಸಲು ಪುರಿ ಅವರನ್ನು ಕರೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.