ADVERTISEMENT

ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ

ಪಿಟಿಐ
Published 27 ಏಪ್ರಿಲ್ 2024, 9:41 IST
Last Updated 27 ಏಪ್ರಿಲ್ 2024, 9:41 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ಪಿಟಿಐ

ಗುವಾಹಟಿ: ಹೈವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಡದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ಯಾರು ಎಂದು ತಿಳಿಯಲು ನೀವು ಇನ್ನೂ ಕೆಲವು ದಿನ ಕಾಯಬೇಕು. ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.

ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ‘ಭ್ರಷ್ಟರನ್ನು ಜೈಲಿಗೆ ಹಾಕಬೇಕು ಎಂದು ಹೇಳುವ ಬಿಜೆಪಿ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ರಾಜ್ಯಸಭೆ ಮತ್ತು ವಿಧಾನಸಭೆಗೆ ಕಳುಹಿಸುತ್ತಿದೆ’ ಎಂದು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಬೆಳೆದು ನಂತರ ಪಕ್ಷ ತೊರೆದ ಅವರ ಬಗ್ಗೆ ನಾವು ಮಾತನಾಡುವುದಿಲ್ಲ. ಕಾಂಗ್ರೆಸ್ ಹರಿಯುವ ನದಿಯಿದ್ದಂತೆ, ಕೆಲವರು ಪಕ್ಷ ಬಿಡುವುದರಿಂದ ಅದರ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.