ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸೋಮವಾರ ಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ.
ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಮೇಟ್ಟುಪಾಲಯಂಮ ನಾಡೂರ್ ಎಂಬಲ್ಲಿ ನಾಲ್ಕು ಮನೆಗಳ ಮೇಲೆ ಆವರಣ ಗೋಡೆ ಕುಸಿದು ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ 5 ಮಂದಿ ಸಾವಿಗೀಡಾಗಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.