ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಸಂಸದೀಯ ಸಮಿತಿಯಲ್ಲಿನ ವಿರೋಧ ಪಕ್ಷದ ಸದಸ್ಯರು ಮಂಗಳವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಅವರು ತೆಗೆದುಕೊಳ್ಳುತ್ತಿರುವ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.
ಸದಸ್ಯರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಸ್ಪೀಕರ್ ಓಂ ಬಿರ್ಲಾ ಅವರು, ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
‘ಸ್ಪೀಕರ್ ಅವರು ತುಂಬಾ ತಾಳ್ಮೆಯಿಂದ ನಮ್ಮ ಮಾತುಗಳನ್ನು ಆಲಿಸಿದ್ದಾರೆ. ಅಲ್ಲದೆ, ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ’ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ತಿಳಿಸಿದರು.
ಸ್ಪೀಕರ್ ಭೇಟಿ ಫಲಪ್ರದವಾಗಿತ್ತು. ನಮ್ಮ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಡಿಎಂಕೆ ಸಂಸದ ಎ. ರಾಜಾ ಹೇಳಿದರು.
ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ಡಿಎಂಕೆಯ ಎ. ರಾಜಾ, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಎಎಪಿಯ ಸಂಜಯ್ ಸಿಂಗ್ ಮತ್ತು ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಸಹಿ ಮಾಡಿದ ಪತ್ರವನ್ನು ಸಂಸದರು ಸ್ಪೀಕರ್‌ಗೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.