ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಕೇಂದ್ರದ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ.
ಮತಗಟ್ಟೆ ಸಮೀಕ್ಷೆಯ ಸರಾಸರಿ ಸಮೀಕ್ಷೆಯ ಪ್ರಕಾರ, ಮೂರು ಅವಧಿಯಿಂದ ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ ಮತ್ತು ಛತ್ತೀಸಗಡದಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲ.
ಬಿಜೆಪಿ ಆಳ್ವಿಕೆ ಇರುವ ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ದೊರೆಯಲಿದ್ದರೂ ಎರಡು ಅವಧಿಯಿಂದ ಅಧಿಕಾರದಲ್ಲಿರುವ ಮಿಜೋರಾಂ ಅನ್ನು ಕಳೆದುಕೊಳ್ಳಲಿದೆ. ತೆಲಂಗಾಣದಲ್ಲಿ ಕೆ. ಚಂದ್ರಶೇಖರ ರಾವ್ ನೇತೃತ್ವದ ಟಿಆರ್‌ಎಸ್ ಎರಡನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲಿದೆ.
* ಇದನ್ನೂ ಓದಿ:ಐದು ರಾಜ್ಯ ಮತದಾನ ಪೂರ್ಣ: ಫಲಿತಾಂಶಕ್ಕೆ ಎಲ್ಲರ ಕಾತರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.