ADVERTISEMENT

Video | ಹೈದರಾಬಾದ್: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮಹಿಳೆಗೆ ಗಂಭೀರ ಗಾಯ

ಪಿಟಿಐ
Published 28 ಅಕ್ಟೋಬರ್ 2024, 9:13 IST
Last Updated 28 ಅಕ್ಟೋಬರ್ 2024, 9:13 IST
<div class="paragraphs"><p>ಹೈದರಾಬಾದ್‌ನ ಪಟಾಕಿ ಅಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡ&nbsp;</p></div>

ಹೈದರಾಬಾದ್‌ನ ಪಟಾಕಿ ಅಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡ 

   

ಪಿಟಿಐ ಚಿತ್ರ 

ಹೈದರಾಬಾದ್: ನಗರದ ಪಟಾಕಿ ಅಂಗಡಿಯೊಂದರಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಾಥಮಿಕ ವರದಿ ಪ್ರಕಾರ, ಅಂಗಡಿಯಲ್ಲಿ ಪಟಾಕಿಗಳನ್ನು ದಸ್ತಾನು ಮಾಡುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿದ್ದು, ಜನರು ಗಾಬರಿಯಿಂದ ಅಂಗಡಿಯಿಂದ ಹೊರಬರುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ. ವಿಡಿಯೊವನ್ನು ಸುದ್ದಿಸಂಸ್ಥೆ ಪಿಟಿಐ ಟ್ಟೀಟ್‌ ಮಾಡಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.