ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಆದರೆ ಮಳೆ ಸುರಿಯುತ್ತಿರುವ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ನೂರಾರು ಮಂದಿ ಸಿಲುಕಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಗಾಯಗೊಂಡ 70 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ.
ಇತ್ತ, ಬೆಂಗಳೂರಿನಿಂದ 30 ಸದಸ್ಯರ ಎನ್‌ಡಿಆರ್‌ಎಫ್ ತಂಡವು ರಕ್ಷಣಾ ಕಾರ್ಯಾಚರಣಗೆ ಸಹಾಯ ಮಾಡಲು ವಯನಾಡಿಗೆ ಧಾವಿಸುತ್ತಿದೆ. ಅರಕ್ಕೋಣಂನ ಎನ್‌ಡಿಆರ್‌ಎಫ್ ತಂಡ ಈಗಾಗಲೇ ವಯನಾಡಿನಲ್ಲಿ ಬೀಡುಬಿಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.