ADVERTISEMENT

ವಯನಾಡು ಭೂಕುಸಿತ: ಪರಿಹಾರ ಕಾರ್ಯಗಳ ಪರಿಶೀಲನೆಗೆ ಕೇರಳಕ್ಕೆ ಬಂದ ಪ.ಬಂ ರಾಜ್ಯಪಾಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜುಲೈ 2024, 2:52 IST
Last Updated 31 ಜುಲೈ 2024, 2:52 IST
<div class="paragraphs"><p>ಸಿ.ವಿ. ಆನಂದ ಬೋಸ್</p></div>

ಸಿ.ವಿ. ಆನಂದ ಬೋಸ್

   

ಪಿಟಿಐ ಚಿತ್ರ

ಕೋಲ್ಕತ್ತ: ವಯನಾಡಿನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮಂಗಳವಾರ ರಾತ್ರಿ ಕೇರಳದ ಕ್ಯಾಲಿಕಟ್‌ಗೆ ತಲುಪಿದ್ದಾರೆ ಎಂದು ರಾಜಭವನ ತಿಳಿಸಿದೆ.

ADVERTISEMENT

ವಯನಾಡಿನಲ್ಲಿ ಸಂಭವಿಸಿರುವ ಸರಣಿ ಭೂಕುಸಿತದ ಪರಿಣಾಮ ಕನಿಷ್ಠ 123 ಮಂದಿ ಮೃತಪಟ್ಟಿದ್ದು, 128 ಜನರು ಗಾಯಗೊಂಡಿದ್ದಾರೆ.

ಈ ಸಂಬಂಧ ಎಕ್ಸ್/ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಜಭವನ, ಬೋಸ್ ಅವರು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದೆ.

'ವಯನಾಡ್ ಬೆಟ್ಟಗಳಲ್ಲಿ ಭೂಕುಸಿತ ಸಂಭವಿಸಿರುವ ಮೆಪ್ಪಾಡಿಗೆ ತೆರಳುವ ಸಲುವಾಗಿ ಬೋಸ್ ಅವರು ಕ್ಯಾಲಿಕಟ್ ವಿಮಾನ ನಿಲ್ದಾಣ ತಲುಪಿದ್ದಾರೆ. ಕಾರ್ಯಾಚರಣೆಯಲ್ಲಿ ತೊಡಗಿರುವ ಕೇಂದ್ರ ಮತ್ತು ರಾಜ್ಯದ ಏಜೆನ್ಸಿಗಳ ಸಂಪರ್ಕದಲ್ಲಿದ್ದಾರೆ' ಎಂದು ಮಾಹಿತಿ ನೀಡಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೂ ನಿಕಟ ಸಂಪರ್ಕದಲ್ಲಿರುವ ಬೋಸ್‌ ಅವರು, ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಿಗೂ ಭೇಟಿ ನೀಡಲಿದ್ದಾರೆ. ಇಡೀ ದೇಶ ಸಂತ್ರಸ್ತರೊಂದಿಗಿದೆ ಎಂದೂ ಹೇಳಿದೆ.

ಭಾರೀ ಮಳೆಯಿಂದಾಗಿ ವಯನಾಡು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಸರಣಿ ಭೂಕುಸಿತಗಳು ಸಂಭವಿಸಿವೆ. ಸಾಕಷ್ಟು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಆತಂಕವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.