ತಿರುವನಂತಪುರ: ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 150ಕ್ಕೆ ಏರಿಕೆಯಾಗಿದೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ.
ಮೆಪ್ಪಾಡಿಯಲ್ಲಿ 2019ರ ಆಗಸ್ಟ್‌ನಲ್ಲಿ ಸಂಭವಿಸಿದ ಭೂಕುಸಿತದ ವೇಳೆ 17 ಮಂದಿ ಮೃತಪಟ್ಟಿದ್ದರು.
ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್‌ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ.
ಸೇನೆ, ವಾಯುಪಡೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.