ADVERTISEMENT

ಕೋಲ್‌ಫೀಲ್ಡ್‌ ಪ್ರಕರಣ: ಟಿಎಂಸಿ ಸಂಸದನ ಅರ್ಜಿ ವಜಾ

ಪಿಟಿಐ
Published 9 ಸೆಪ್ಟೆಂಬರ್ 2024, 11:36 IST
Last Updated 9 ಸೆಪ್ಟೆಂಬರ್ 2024, 11:36 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ವಿರುದ್ಧ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಸೋಮವಾರ ಈ ತೀರ್ಪು ನೀಡಿದೆ.

ಈಸ್ಟರ್ನ್‌ ಕೋಲ್‌ಫೀಲ್ಡ್‌ ಲಿಮಿಟೆಡ್‌ನ ಗುತ್ತಿಗೆ ಪ್ರದೇಶದಲ್ಲಿ ಕಲ್ಲಿದ್ದಲು ಕಳವು ಮತ್ತು ಅಕ್ರಮ ಉತ್ಖನನಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿತ್ತು.

ADVERTISEMENT

ಇದನ್ನು ಬ್ಯಾನರ್ಜಿ ದಂಪತಿ ಪ್ರಶ್ನಿಸಿದ್ದರು. ವಿಚಾರಣೆಯನ್ನು ನವದೆಹಲಿಯ ಬದಲು ಕೋಲ್ಕತ್ತದಲ್ಲಿ ನಡೆಸುವಂತೆ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.