ADVERTISEMENT

ಕರ್ತವ್ಯ ನಿರ್ವಹಣೆಯಲ್ಲಿ ಪ.ಬಂಗಾಳ ಸರ್ಕಾರ ವಿಫಲ, ರಾಜಭವನ ಮಧ್ಯಪ್ರವೇಶ: ಗವರ್ನರ್

ಪಿಟಿಐ
Published 16 ಅಕ್ಟೋಬರ್ 2024, 10:41 IST
Last Updated 16 ಅಕ್ಟೋಬರ್ 2024, 10:41 IST
<div class="paragraphs"><p>ಆರ್‌.ಜಿ.ಕರ್ ಘಟನೆ: ಪ್ರತಿಭಟನೆ</p></div>

ಆರ್‌.ಜಿ.ಕರ್ ಘಟನೆ: ಪ್ರತಿಭಟನೆ

   

(ಪಿಟಿಐ ಚಿತ್ರ)

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕರ್ತವ್ಯವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ದೂರಿದ್ದಾರೆ.

ADVERTISEMENT

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬೋಸ್, ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ ಆರ್.ಜಿ.ಕರ್ ಬಿಕ್ಕಟ್ಟಿನಲ್ಲಿ ರಾಜಭವನವು ಮಧ್ಯಪ್ರವೇಶಿಸಲಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಈ ಕುರಿತು ಬೋಸ್ ಪ್ರತಿಕ್ರಿಯಿಸಿದ್ದಾರೆ.

'ನಾಗರಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದು ರಾಜ್ಯ ಸರ್ಕಾರದ, ವಿಶೇಷವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೂಲಭೂತ ಕರ್ತವ್ಯವಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮೂಲಭೂತ ಕರ್ತವ್ಯವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವೈಫಲ್ಯ ಕಂಡಿದೆ' ಎಂದು ಅವರು ಆರೋಪಿಸಿದ್ದಾರೆ.

'ಈ ಪ್ರಕರಣದಲ್ಲಿ ರಾಜಭವನವು ಮಧ್ಯಪ್ರವೇಶಿಸಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ ದೇಶದ ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ ರಾಜಭವನವು ಮಧ್ಯಪ್ರವೇಶಿಸಲಿದೆ' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.