ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ನಡೆದಿರುವ ಭಯೋತ್ಪಾದಕ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಜಾಸತ್ತಾತ್ಮಕ ಪ್ರಗತಿಪರ ಆಜಾದ್ ಪಕ್ಷದ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಉಗ್ರವಾದದ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಕರೆ ನೀಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿದೆ. ಆದರೆ ರಚೌರಿ ಹಾಗೂ ಕೋಕರ್‌ನಾಗ್ ಪ್ರದೇಶಗಳಲ್ಲಿ ಉಗ್ರವಾದ ಘಟನೆಗಳು ನಡೆದಿವೆ. ಈ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಹೇಳಿದರು.
ಈ ಕೃತ್ಯಗಳನ್ನು ಗಮನಿಸಿದರೆ ಮತ್ತೆ ಉಗ್ರವಾದ ತಲೆ ಎತ್ತಲು ಪ್ರಯತ್ನಿಸುತ್ತಿದೆ ಎಂಬುದು ತೋರುತ್ತದೆ. ನಾವೆಲ್ಲರೂ, ಜಮ್ಮು ಮತ್ತು ಕಾಶ್ಮೀರದ ಜನರು, ಸರ್ಕಾರ ಮತ್ತು ರಾಜಕಾರಣಿಗಳು ಜಂಟಿಯಾಗಿ ಉಗ್ರವಾದದ ವಿರುದ್ಧ ಹೋರಾಡಬೇಕು" ಎಂದು ಹೇಳಿದರು.
ಇದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗುಲಾಂ ನಬಿ ಆಜಾದ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.