ADVERTISEMENT

ಇಂತಹ ಪ್ರಧಾನಿಯನ್ನು ಹಿಂದೆಂದೂ ನೋಡಿಲ್ಲ: ದಿಗ್ವಿಜಯ್ ಸಿಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜುಲೈ 2023, 11:02 IST
Last Updated 25 ಜುಲೈ 2023, 11:02 IST
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್   (ಸಂಗ್ರಹ ಚಿತ್ರ)

ನವದೆಹಲಿ: ಮಣಿಪುರ ಹಿಂಸಾಚಾರ ಹಾಗೂ ಸ್ಥಿತಿಗತಿಯ ಕುರಿತಾಗಿ ಉಭಯ ಸದನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವರವಾದ ಹೇಳಿಕೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ವಿರೋಧ ಪಕ್ಷಗಳ ಗದ್ದಲದಿಂದಾಗಿ ಉಭಯ ಸದನಗಳ ಸುಗಮ ಕಲಾಪಕ್ಕೆ ಅಡ್ಡಿಯಾಗಿದೆ.

ಈ ನಡುವೆ ಹೇಳಿಕೆ ಕೊಟ್ಟಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಸಂಸತ್ತಿನಲ್ಲಿ ಉತ್ತರ ನೀಡಲು ಹೆದರುವ ಇಂತಹ ಪ್ರಧಾನಿಯನ್ನು ನಾವು ಹಿಂದೆಂದೂ ನೋಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ 'ಎಎನ್‌ಐ'ಗೆ ಪ್ರತಿಕ್ರಿಯೆ ನೀಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಅವರಿಗೆ 'ಇಂಡಿಯಾ' (ವಿಪಕ್ಷಗಳ ಒಕ್ಕೂಟ) ಎಂಬ ಪದದಲ್ಲಿ ಸಮಸ್ಯೆ ಕಾಣಿಸಿದ್ದರೆ ಮೊದಲು ಅವರು ಬಿಜೆಪಿಯಿಂದ ಭಾರತವನ್ನು ತೆಗೆದು ಹಾಕಲಿ. ಇಂಡಿಯಾ ಹೆಸರಿನ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಸಂವಿಧಾನ ಮತ್ತು ಸಂಸತ್ತನ್ನು ಪ್ರಧಾನಿ ಏಕೆ ದ್ವೇಷಿಸುತ್ತಿದ್ದಾರೆ?

ಮತ್ತೊಂದೆಡೆ ಹೇಳಿಕೆ ನೀಡಿರುವ ರಣದೀಪ್ ಸುರ್ಜೇವಾಲಾ, ಪ್ರಧಾನಿ ದೇಶ ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ. ಅವರಿಗೆ ಅಮೆರಿಕದ ಸಂಸತ್ತಿನಲ್ಲಿ ಮಾತನಾಡಲು ಸಮಯವಿದೆ. ಆದರೆ ಮಣಿಪುರ ವಿಷಯದಲ್ಲಿ ದೇಶದ ಸಂಸತ್ತಿನಲ್ಲಿ ಮಾತನಾಡಲು ಸಮಯವಿಲ್ಲ. ಭಾರತದ ಸಂವಿಧಾನ ಮತ್ತು ಸಂಸತ್ತನ್ನು ಪ್ರಧಾನಿ ಏಕೆ ದ್ವೇಷಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.