ADVERTISEMENT

ನೇತಾಜಿಯ ಕನಸು ನನಸಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು: ಭಾಗವತ್

ಪಿಟಿಐ
Published 23 ಜನವರಿ 2024, 13:30 IST
Last Updated 23 ಜನವರಿ 2024, 13:30 IST
<div class="paragraphs"><p>ಮೋಹನ್ ಭಾಗವತ್</p></div>

ಮೋಹನ್ ಭಾಗವತ್

   

(ಪಿಟಿಐ ಸಂಗ್ರಹ ಚಿತ್ರ)

ಬರಸತ್ (ಪ.ಬಂಗಾಳ): ಬಲಿಷ್ಠ ರಾಷ್ಟ್ರ ನಿರ್ಮಾಣದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸು ನನಸಾಗಿಸುವ ನಿಟ್ಟಿನಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.

ADVERTISEMENT

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜಯಂತಿಯ ಅಂಗವಾಗಿ ಇಂದು (ಜ.23) ಉತ್ತರ 24 ಪರಗಣ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವುದರ ಜೊತೆಗೆ ನಾವು ಜೀವನದಲ್ಲಿ ನೇತಾಜಿ ಅವರ ಗುಣಗಳು, ಆದರ್ಶ ಮತ್ತು ತತ್ವಗಳನ್ನು ಆಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅವರ ಕನಸುಗಳು ಇನ್ನೂ ನನಸಾಗದಿದ್ದರೆ ಅದನ್ನು ಈಡೇರಿಸುವ ಹೊಣೆ ಯಾರದ್ದು? ಇಂದಿನ ಪೀಳಿಗೆಯು ಅದನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸಿದರೆ ಮಾತ್ರ ಕನಸು ನನಸಾಗಲಿದೆ ಎಂದು ತಿಳಿಸಿದ್ದಾರೆ.

ಕೇವಲ ಒಂದು ಪೀಳಿಗೆಯಿಂದ ಕನಸು ನನಸಾಗಿಸಲು ಸಾಧ್ಯವಿಲ್ಲ. ತಲೆಮಾರಿನಿಂದ ತಲೆಮಾರಿನ ಜನರು ಅವರ ಕನಸನ್ನು ಸಾಧಿಸಲು ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.