ADVERTISEMENT

ಮೀಸಲಾತಿ ಮೇಲಿನ ಶೇ 50ರ ಮಿತಿಯನ್ನು ತೆಗೆದು ಹಾಕುತ್ತೇವೆ: ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಅಕ್ಟೋಬರ್ 2024, 13:23 IST
Last Updated 19 ಅಕ್ಟೋಬರ್ 2024, 13:23 IST
<div class="paragraphs"><p>ರಾಹುಲ್ ಗಾಂಧಿ&nbsp;&nbsp;</p></div>

ರಾಹುಲ್ ಗಾಂಧಿ  

   

ರಾಂಚಿ: ಮೀಸಲಾತಿಗೆ ನಿಗದಿ ಮಾಡಿರುವ ಶೇ 50ರ ಮಿತಿಯನ್ನು ತೆಗೆದು ಹಾಕುತ್ತೇವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಂಚಿಯಲ್ಲಿ ನಡೆದ 'ಸಂವಿಧಾನ ಸಮ್ಮಾನ್ ಸಮ್ಮೇಳನ'ವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಂವಿಧಾನದ ಮೇಲೆ ಎಲ್ಲ ಕಡೆಯಿಂದ ದಾಳಿ ನಡೆಯುತ್ತಿದ್ದು, ರಕ್ಷಣೆ ಅಗತ್ಯವಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಇದೇ ವೇಳೆ ಕಾಂಗ್ರೆಸ್ ಎಂದಿಗೂ ಜಾರ್ಖಂಡ್‌ನ ಆದಿವಾಸಿಗಳ ಹಿತೈಷಿಯಾಗಲು ಸಾಧ್ಯವಿಲ್ಲ ಎಂಬ ಬಿಜೆಪಿ ನಾಯಕ, ಮಾಜಿ ಸಿಎಂ ಚಂಪೈ ಸೊರೇನ್ ಹೇಳಿಕೆಗೆ ರಾಹುಲ್ ತಿರುಗೇಟು ನೀಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮೆಂತ್ ಸೊರೇನ್ ಅವರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 81 ಸ್ಥಾನಗಳ ಪೈಕಿ ಕಾಂಗ್ರೆಸ್ ಹಾಗೂ ಜೆಎಂಎಂ 70 ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳಲಾಗಿದೆ. ಉಳಿದ 11 ಕ್ಷೇತ್ರಗಳಲ್ಲಿ ಆರ್‌ಜೆಡಿ ಮತ್ತು ಎಡ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ ಎಂದು ಹೇಮಂತ್ ಸೊರೇನ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯು ನ. 13 ಹಾಗೂ 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನ. 23ರಂದು ಮತ ಎಣಿಕೆ ನಡೆಯಲಿದೆ.

ಈಚೆಗೆ ಮುಂಬೈಯಲ್ಲಿ ಮಾತನಾಡಿದ್ದ ರಾಹುಲ್, ‘ಮೀಸಲಾತಿಗೆ ಶೇ 50ರ ಮಿತಿ ಹಾಕಲಾಗಿದೆ. ಇದು ‘ಕೃತಕ ಅಡ್ಡಿ’. ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಒಕ್ಕೂಟ ಜಾತಿ ಗಣತಿ ನಡೆಸಿ, ಪ್ರಸ್ತುತ ಮೀಸಲಾತಿಗೆ ನಿಗದಿಪಡಿಸಿರುವ ಮಿತಿಯನ್ನು ತೆಗೆದುಹಾಕಲಿದೆ. ಇದನ್ನು ಪ್ರಪಂಚದ ಯಾವುದೇ ಶಕ್ತಿಗೂ ತಡೆಯಲು ಸಾಧ್ಯವಿಲ್ಲ’ ಎಂದಿದ್ದರು.

ಕಾಂಗ್ರೆಸ್ ಸಭೆ

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಚರ್ಚಿಸಲು ನಡೆಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಭಾನುವಾರ ಮತ್ತು ಸೋಮವಾರ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.