ADVERTISEMENT

ದೆಹಲಿ ಸಿಎಂಗಾದ ಸ್ಥಿತಿ ಪಶ್ಚಿಮ ಬಂಗಾಳದಲ್ಲೂ ಎದುರಾಗಬಹುದು: ಬಿಜೆಪಿ ನಾಯಕ

ಪಿಟಿಐ
Published 22 ಮಾರ್ಚ್ 2024, 9:14 IST
Last Updated 22 ಮಾರ್ಚ್ 2024, 9:14 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ಕೋಲ್ಕತ್ತ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನವನ್ನು ಉಲ್ಲೇಖಿಸಿರುವ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್, ರಾಜ್ಯದಲ್ಲೂ ಇದಕ್ಕೆ ಸಮಾನವಾದ ಪರಿಸ್ಥಿತಿ ಎದುರಾಗಬಹುದು ಎಂದು ಶುಕ್ರವಾರ ಹೇಳಿದ್ದಾರೆ.

ADVERTISEMENT

ದೆಹಲಿಯ ಹಾಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರನ್ನು ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದರು.

'ಕಳೆದ ತಿಂಗಳು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಬಂಧಿಸಲಾಗಿದೆ. ಈಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ನೀವು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡರೆ, ಮುಖ್ಯಮಂತ್ರಿ ಆದ ಮಾತ್ರಕ್ಕೆ ಯಾವುದೇ ವಿನಾಯಿತಿ ಸಿಗುವುದಿಲ್ಲ' ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಿನ ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಹಾಗಾಗಿ ದೆಹಲಿಯಂತಹ ಪರಿಸ್ಥಿತಿಗೆ ಪಶ್ಚಿಮ ಬಂಗಾಳವೂ ಸಾಕ್ಷಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಕೇಜ್ರಿವಾಲ್ ವಿರುದ್ಧ ಇ.ಡಿಯನ್ನು ಬಳಕೆ ಮಾಡಿದೆ. ಬಂಗಾಳದಲ್ಲೂ ರಾಜಕೀಯ ಸೇಡು ತೀರಿಸಿಕೊಳ್ಳಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.