ADVERTISEMENT

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುತ್ತಿಲ್ಲ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2023, 9:17 IST
Last Updated 27 ಡಿಸೆಂಬರ್ 2023, 9:17 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ ಚಿತ್ರ)

ನವದೆಹಲಿ: ಅಯೋಧ್ಯೆಯಲ್ಲಿ 2024ರ ಜ.22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ ಎಂದು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ADVERTISEMENT

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿದ್ದವು.

ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ನಗರದ ಪ್ರಮುಖ ಬೀದಿಗಳನ್ನು ಅಲಂಕರಿಸಲಾಗುತ್ತಿದೆ. 70 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಅಂತಸ್ತಿನ ಕಟ್ಟಡವನ್ನು ಜ. 22ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.