ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರ ಆಪ್ತರಾಗಿರುವ ಅರ್ಪಿತಾ ಮುಖರ್ಜಿ ಅವರನ್ನು ಇ.ಡಿ ಬಂಧಿಸಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಶುಕ್ರವಾರವಷ್ಟೇ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ₹20 ಕೋಟಿ ನಗದನ್ನು ವಶಕ್ಕೆ ಪಡೆದಿದ್ದರು.
‘ಇದು ಎಸ್ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ಹಣವಿರಬಹುದು ಎಂದು ಶಂಕಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದರು.
ಹಗರಣಕ್ಕೆ ಸಂಬಂಧಿಸಿ ಪಾರ್ಥ ಚಟರ್ಜಿ ಅವರನ್ನು ಇ.ಡಿ. ಅಧಿಕಾರಿಗಳು ಶನಿವಾರ ಬೆಳಿಗ್ಗೆಯೇ ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.