ಜಲ್ಪೈಗುರಿ: ವಿಜಯದಶಮಿಯಲ್ಲಿ ದುರ್ಗಾ ಪೂಜೆಯ ಬಳಿಕ ವಿಗ್ರಹ ವಿಸರ್ಜನೆಯ ಸಂದರ್ಭದಲ್ಲಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನದಿಯಲ್ಲಿ ದುರ್ಗಾ ಮಾತೆಯ ವಿಸರ್ಜನೆ ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಾಲ್ವರು ಮಹಿಳೆಯರ ಸಹಿತ ಎಂಟು ಮಂದಿ ಮುಳುಗಿ ಮೃತಪಟ್ಟಿರುವುದು ದೃಢಪಟ್ಟಿದೆ.
ಹಲವರು ಕಣ್ಮರೆಯಾಗಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ದುರ್ಗಾ ಪೂಜೆಯ ವಿಗ್ರಹ ವಿಸರ್ಜನೆ ನಡೆಯುತ್ತಿರುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದರು.
ಅವಘಡದಲ್ಲಿ ಸಿಲುಕಿ ಎಂಟು ಮಂದಿ ಮೃತಪಟ್ಟಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಸುಮಾರು 50 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋದಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.