ನವದೆಹಲಿ: ‘ಸತ್ಯವನ್ನು ಹೇಳಿದ್ದಕ್ಕೆ ಶಿಕ್ಷೆಯಿದ್ದರೆ, ‘ಅಧಿಕಾರದಲ್ಲಿ ಸುಳ್ಳು’ ಇದೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಂದು ರಾಹುಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ನ್ಯಾಷನಲ್ ಪ್ರೆಸ್ ಡೇ’ ಎನ್ನುವ ಹ್ಯಾಷ್ ಟ್ಯಾಗ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆಗಳನ್ನು ವರದಿ ಮಾಡುತ್ತಿದ್ದ ಇಬ್ಬರು ಪತ್ರಕರ್ತೆಯರನ್ನು ಪೊಲೀಸರು ಬಂಧಿಸಿದ ಬಳಿಕ, ‘ಪತ್ರಿಕೋದ್ಯಮವನ್ನು ‘ಕೊಲ್ಲುವ’ ಕಾರ್ಯದಲ್ಲಿ ಸರ್ಕಾರ ನಿರತವಾಗಿದೆ ಎಂದು ಆರೋಪಿಸಿ, ರಾಹುಲ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಹಿಂಸಾಚಾರ ಘಟನೆ ಕುರಿತು ಸಾಮಾಜಿಕ ತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ಪತ್ರಕರ್ತೆಯರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.