ಪುಣೆ: ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಕಾಂಗ್ರೆಸ್ ಬಯಸಿದೆ ಎಂದು ಪ್ರತಿಪಾದಿಸಿರುವ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಟೀಕಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ವಿವಾದಾತ್ಮಕ ನಿಬಂಧನೆಯನ್ನು ಈಗಾಗಲೇ ಸಂಸತ್ತು ರದ್ದುಗೊಳಿಸಿದೆಯಲ್ಲ ಎಂದಿದ್ದಾರೆ.
ಪುಣೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಒಡಕು ಮೂಡಿಸುವ ಸಲುವಾಗಿ ಬಿಜೆಪಿಯು ಈ ವಿಷಯವನ್ನು ಜೀವಂತವಾಗಿರಿಸಲು ಬಯಸಿದೆ ಎಂದು ಆರೋಪಿಸಿದರು.
‘ಕಾಂಗ್ರೆಸ್‌ನ ಯಾವ ನಾಯಕರು, ಎಲ್ಲಿ ಈ ಮಾತುಗಳನ್ನು ಹೇಳಿದ್ದಾರೆ ಎಂಬುದನ್ನು ಅಮಿತ್ ಶಾ ಅವರು ತಿಳಿಸಲಿ’ ಎಂದಿರುವ ಖರ್ಗೆ ಅವರು, ‘ನೀವು ಈ ಮಾತುಗಳನ್ನು ಬೇಕಿದ್ದರೆ ಕಾಶ್ಮೀರದಲ್ಲಿ ಹೋಗಿ ಹೇಳಿ. ಅಲ್ಲಿ ಈಗಾಗಲೇ ಚುನಾವಣೆ ಮುಗಿದಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.