ನೋಯ್ಡಾ:ಅಕ್ರಮವಾಗಿ ನಿರ್ಮಿಸಿರುವ ಸೂಪರ್‌ಟೆಕ್‌ನ ಬಹು ಅಂತಸ್ತಿನ ಅವಳಿ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮ ಮಾಡಲಾಗಿದೆ.
ಈ ಅವಳಿ ಕಟ್ಟಡಗಳನ್ನು ಏಕೆ ನೆಲಸಮಗೊಳಿಸಲಾಗುತ್ತಿದೆ? ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.
1) ಇಲ್ಲಿನ ಎಮರಾಲ್ಡ್ ಕೋರ್ಟ್ ಸೊಸೈಟಿ ಆವರಣದಲ್ಲಿ ನಿಯಮ ಉಲ್ಲಂಘಿಸಿಸೂಪರ್‌ಟೆಕ್ ಕಂಪನಿ100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಿತ್ತು. ನಿಯಮಗಳನ್ನು ಉಲ್ಲಂಘನೆ ಮಾಡಿ ಈ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಆ ಕಟ್ಟಡಗಳ ನೆಲಸಮಕ್ಕೆ ಆದೇಶ ಮಾಡಿತ್ತು.
2) ನೋಯ್ಡಾ ಪ್ರಾಧಿಕಾರದ ಮಾರ್ಗದರ್ಶನದಲ್ಲಿಸೂಪರ್‌ಟೆಕ್ ಕಂಪನಿ ₹ 20 ಕೋಟಿ ಖರ್ಚಿನಲ್ಲಿ ಸುಮಾರು 3,700 ಕೆ.ಜಿ ಸ್ಫೋಟಕಗಳನ್ನು ಬಳಸಿ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
3) ಕಟ್ಟಡ ನಿರ್ಮಾಣದ ಮೂಲ ನಕ್ಷೆಯಲ್ಲಿ 14 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಕಂಪನಿಯು 40 ಮಹಡಿಗಳ ಕಟ್ಟಡ ನಿರ್ಮಾಣ ಮಾಡಿತ್ತು. ಹಾಗೇ ಉದ್ಯಾನವನ ನಿರ್ಮಾಣ ಮಾಡುವ ಸ್ಥಳದಲ್ಲಿ ಈ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.
4) 2012ರಲ್ಲಿ ಸ್ಥಳೀಯ ನಿವಾಸಿಗಳುಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದುಅಲಹಾಬಾದ್ ಹೈಕೋರ್ಟ್‌ಗೆ ಹೋಗಿದ್ದರು. ನ್ಯಾಯಾಲಯ 2014ರಲ್ಲಿ ನಿವಾಸಿಗಳ ಪರವಾಗಿ ತೀರ್ಪು ನೀಡಿ, 4 ತಿಂಗಳ ಒಳಗಾಗಿ ಕಪನಿಯು ತನ್ನ ಸ್ವಂತ ಖರ್ಚಿನಲ್ಲಿ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಆದೇಶ ನೀಡಿತ್ತು.
5) ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಫ್ಲಾಟ್ ಖರೀದಿರಾರುಮತ್ತು ಕಂಪನಿಯು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿತ್ತು. ಅಂತಿಮ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು, ಕಟ್ಟಡಗಳನ್ನು ನೆಲಸಮ ಮಾಡುವಂತೆ ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.