ADVERTISEMENT

ಹಿಂದಿಯಲ್ಲಿ ಕಲಾಪ ನಡೆಸಬೇಕು ಎಂದು ಕೋರಿದ ಅರ್ಜಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2024, 9:55 IST
Last Updated 4 ನವೆಂಬರ್ 2024, 9:55 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಸುಪ್ರೀಂ ಕೋರ್ಟ್‌ನ ಕಲಾ‍ಪಗಳು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಇರಬೇಕು ಎನ್ನುವ ಸಂವಿಧಾನದ 348 (1)ನೇ ವಿಧಿಯನ್ನು ಪ್ರಶ್ನಿಸಿ, ಹಿಂದಿ ಭಾಷೆಯಲ್ಲೂ ಕಲಾಪ ನಡೆಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ.

ಈ ಬಗ್ಗೆ ‘ಲೈವ್‌ ಲಾ’ ವರದಿ ಮಾಡಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಹಾಗೂ ಮನೋಜ್ ಮಿಶ್ರಾ ಅರ್ಜಿಯ ವಿಚಾರಣೆ ನಡೆಸಿದರು.

‘ಹಿಂದಿ ಭಾಷೆಗೆ ಏಕೆ ಮಾತ್ರ ವಿಶೇಷ ಪ್ರಾಮುಖ್ಯತೆ’ ಎಂದು ಅರ್ಜಿದಾರರಿಗೆ ಸಿಜೆಐ ಚಂದ್ರಚೂಡ್ ಪ್ರಶ್ನಿಸಿದರು. ಅಲ್ಲದೆ ಸುಪ್ರೀಂ ಕೋರ್ಟ್‌ನಲ್ಲಿ ವೈವಿಧ್ಯತೆ ಇರುವ ದೇಶದ ಎಲ್ಲಾ ರಾಜ್ಯಗಳ ಅರ್ಜಿಗಳೂ ಸಲ್ಲಿಕೆಯಾಗುತ್ತವೆ. ಹಾಗಾದರೆ ನಾವು ಸಂವಿಧಾನದಲ್ಲಿ ಮಾನ್ಯತೆ ಲಭಿಸಿರುವ ಎಲ್ಲಾ ಭಾಷೆಗಳಲ್ಲೂ ಕಲಾಪ ನಡೆಸಬೇಕಾ? ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

‘ಸಂವಿಧಾನದ 348(1) ವಿಧಿಯ ಸಿಂಧುತ್ವವನ್ನು ನೀವು ಹೇಗೆ ಪ್ರಶ್ನಿಸಿದ್ದೀರಿ. ಅದು ಸಂವಿಧಾನ ಮೂಲ ಭಾಗವಾಗಿದೆ’ ಎಂದು ಚಂದ್ರಚೂಡ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿರುವ ಭಾಷೆಯ ಸಮಸ್ಯೆಯು ನ್ಯಾಯದ ನಿರಾಕರಣೆಗೆ ಕಾರಣವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಹೆಚ್ಚಿನ ವಿಚಾರಣೆಗೆ ನಿರಾಕರಿಸಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.