ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಹೋರಾಟ ನಡೆಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡಿರುವುದು ಸಂತಸ ತಂದಿದೆ. ಇಂದು ಪ್ರಜಾಪ್ರಭುತ್ವವನ್ನು ಮರಳಿ ಸ್ಥಾಪಿಸಲಿದೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಬಹು ದೊಡ್ಡ ಗೆಲುವು ದೊರಕಿದೆ ಎಂದು ಖರ್ಗೆ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರು ಸ್ಥಾಪಿಪಿಸುವವರೆಗೂ ಮೈತ್ರಿಕೂಟ ಹೋರಾಟ ನಡೆಸಲಿದೆ ಎಂದು ಖರ್ಗೆ ಹೇಳಿದ್ದಾರೆ.
ಬುಧವಾರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ಸ್ವೀಕರಿಸಿದರು. ಈ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸುಪ್ರಿಯಾ ಸುಳೆ, ಡಿಎಂಕೆಯ ಕನಿಮೋಳಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.