ADVERTISEMENT

ಪ್ರಕರಣಗಳ ಮರುವಿಚಾರಣೆಗೆ ಎಸ್‌ಒಪಿ: ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ

ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ ಇಂಗಿತ

ಪಿಟಿಐ
Published 4 ಅಕ್ಟೋಬರ್ 2024, 16:58 IST
Last Updated 4 ಅಕ್ಟೋಬರ್ 2024, 16:58 IST
–
   

ನವದೆಹಲಿ: ಹೈಕೋರ್ಟ್‌ಗಳು ತೆರೆದ ನ್ಯಾಯಾಲಯಗಳಲ್ಲಿ ಉಕ್ತಲೇಖನ ಮೂಲಕ ನೀಡಿದ್ದ ಆದೇಶಗಳನ್ನು ಹಿಂತೆಗೆದುಕೊಳ್ಳುವುದು ಹಾಗೂ ಪ್ರಕರಣದ ಮರುವಿಚಾರಣೆ ನಡೆಸುವುದಕ್ಕೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ರಚಿಸುವುದಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ನಿವೃತ್ತ ಐಪಿಎಸ್‌ ಅಧಿಕಾರಿ ಎಂ.ಎಸ್‌.ಜಾಫರ್ ಸೇಟ್‌ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಮೊದಲಿಗೆ ರದ್ದುಗೊಳಿಸಿದ್ದ ಮದ್ರಾಸ್‌ ಹೈಕೋರ್ಟ್‌, ನಂತರ ತನ್ನ ನಿರ್ದೇಶನ ಮಾರ್ಪಡಿಸಿ, ಪ್ರಕರಣ ಕುರಿತು ಮತ್ತೆ ವಿಚಾರಣೆ ನಡೆಸಿತ್ತು. ಈ ಪ್ರಕರಣ ಕುರಿತ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಮಾತು ಹೇಳಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್‌ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ADVERTISEMENT

ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಗೂ ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದ ವಿಚಾರಣೆಗೂ ಪೀಠವು ತಡೆ ನೀಡಿ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.