ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ’ಸಂವಿಧಾನ’ದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಅಮಿತ್ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಈ ನಡವಳಿಕೆ ಒಪ್ಪುವಂತಹದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ (ವಿರೋಧ ಪಕ್ಷಗಳ) ಸಂದೇಶವು ಜನರಿಗೆ ತಲುಪುತ್ತದೆ. ‘ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧವಿಲ್ಲ. ಸಂವಿಧಾನವನ್ನು ರಕ್ಷಿಸುವ ಕಾರ್ಯ ಮಾಡುತ್ತೇವೆ‘ ಎಂದು ಪ್ರಶ್ನೆಯೊಂದಕ್ಕೆ ರಾಹುಲ್ ಉತ್ತರಿಸಿದರು.
18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎಂದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ‘ಇಂಡಿಯಾ‘ ನಾಯಕರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.