ಮುಂಬೈ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆನೆಪದರದವರಿಗೆ ಮೀಸಲಾತಿ ಸೌಲಭ್ಯ ನೀಡಬಾರದು ಎಂದು ಸುಪ್ರೀಂಕೋರ್ಟ್ ಮಾಡಿರುವ ಸಲಹೆಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಜಾತಿಯಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದವರ ಅಭಿವೃದ್ಧಿಯ ಉದ್ದೇಶದಿಂದ ಆ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಕಲ್ಪಿಸಲು, ಒಳವರ್ಗೀಕರಣ ಮಾಡುವ ಸಾಂವಿಧಾನಿಕ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯಲ್ಲಿ ಕೆನೆಪದರ ನೀತಿ ಅಳವಡಿಸಬಹುದೆಂದೂ ಅಭಿಪ್ರಾಯಪಟ್ಟಿತ್ತು. ಈ ಬೆನ್ನಲ್ಲೇ ಅಠಾವಳೆ ಈ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಠಾವಳೆ ಅವರು, ‘ಒಳವರ್ಗೀಕರಣವು ಹಿಂದುಳಿದಿರುವ ಜಾತಿಗಳಿಗೆ ನ್ಯಾಯವನ್ನು ಕಲ್ಪಿಸುತ್ತದೆ. ಇತರೆ ಹಿಂದುಳಿದ ವರ್ಗ (ಒಬಿಸಿ), ಸಾಮಾನ್ಯ ವರ್ಗದಲ್ಲೂ ಇದೇ ರೀತಿಯ ವರ್ಗೀಕರಣ ಆಗಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.