ನವದೆಹಲಿ: ಲಡಾಖ್ ಜನರ ಸಮಸ್ಯೆಗಳ ಕುರಿತು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಲಡಾಖ್ ಜನರ ರಾಜಕೀಯ ಧ್ವನಿಯನ್ನು ಹತ್ತಿಕ್ಕಲಾಗಿದ್ದು, ಉದ್ಯೋಗ ಖಾತ್ರಿಯ ಕುರಿತು ಕೇಂದ್ರ ಸರ್ಕಾರವು ಸುಳ್ಳು ಭರವಸೆ ನೀಡಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.
ಲಡಾಖ್ ಜನರ ರಾಜಕೀಯ ಧ್ವನಿಯನ್ನು ದಮನಿಸಲಾಗುತ್ತಿದೆ. ಜನರಿಗೆ ಉದ್ಯೋಗ ಕುರಿತು ಸರ್ಕಾರ ನೀಡಿದ ಭರವಸೆಗಳೆಲ್ಲ ಸುಳ್ಳಾಗಿದೆ. ಈ ಎಲ್ಲ ವಿಷಯಗಳ ಕುರಿತು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ದೇಶದ ಒಂದಿಂಚೂ ಭೂಮಿ ಚೀನಾ ವಶಪಡಿಸಿಕೊಂಡಿಲ್ಲ ಎಂಬ ಮೋದಿ ಹೇಳಿಕೆ ಸುಳ್ಳು: ರಾಹುಲ್ ಗಾಂಧಿ
ನಾನು ಲಡಾಖ್‌ನ ಮೂಲೆ ಮೂಲೆಗೆ ಹೋಗಿ ಯುವಕರು, ತಾಯಂದಿರು, ಸಹೋದರಿಯರು ಮತ್ತು ಬಡವರ ಜೊತೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಭಾರತದ ಸಾವಿರಾರು ಕಿಲೋಮೀಟರ್ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಇದನ್ನು ನಿರಾಕರಿಸಿರುವ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ಲಡಾಖ್‌ನಲ್ಲಿರುವ ಪ್ರತಿಯೊಬ್ಬ ನಾಗರಿಕನಿಗೂ ಇದರ ಬಗ್ಗೆ ಗೊತ್ತಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಡಾಖ್ ಜನರಿಂದ ತುಂಬಾ ಪ್ರೀತಿ ದೊರಕಿದ್ದು, ಇದಕ್ಕಾಗಿ ರಾಹುಲ್ ಗಾಂಧಿ ಧನ್ಯವಾದ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.