ADVERTISEMENT

ಶೀಘ್ರದಲ್ಲಿಯೇ ಆರೋಪ ಪಟ್ಟಿ ಸಲ್ಲಿಕೆ: ಇ.ಡಿ

​ಪ್ರಜಾವಾಣಿ ವಾರ್ತೆ
Published 16 ಮೇ 2024, 18:41 IST
Last Updated 16 ಮೇ 2024, 18:41 IST
<div class="paragraphs"><p>ಇ.ಡಿ</p></div>

ಇ.ಡಿ

   

(ಸಂಗ್ರಹ ಚಿತ್ರ)

ನವದೆಹಲಿ (ಪಿಟಿಐ): ದೆಹಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಶೀಘ್ರದಲ್ಲಿಯೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ADVERTISEMENT

ಇ.ಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು ಅವರು, ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠಕ್ಕೆ ಈ ಕುರಿತು ತಿಳಿಸಿದರು. ಕೇಜ್ರಿವಾಲ್‌ ಅವರು ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ರಾಜು ಅವರು ಈ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.