ADVERTISEMENT

ಶಬರಿಮಲೆ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ: ಅಧಿಸೂಚನೆ ವಾಪಸ್

ಹೈಕೋರ್ಟ್‌ಗೆ ಮಾಹಿತಿ ನೀಡಿದ ಕೇರಳ ಸರ್ಕಾರ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 14:33 IST
Last Updated 21 ಜೂನ್ 2024, 14:33 IST
.
.   

ಕೊಚ್ಚಿ: ಕೋಟಯಂ ಜಿಲ್ಲೆಯಲ್ಲಿ ಶಬರಿಮಲೆ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಪ್ರಾಥಮಿಕ ಅಧಿಸೂಚನೆಯನ್ನು ವಾಪಸ್ ಪಡೆಯುವುದಾಗಿ ಕೇರಳ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಸಾಮಾಜಿಕ ಪರಿಣಾಮ ಮೌಲ್ಯಮಾಪನ (ಎಸ್‌ಐಎ) ಅಧ್ಯಯನವನ್ನು ಬೇರೆ ಸಂಸ್ಥೆಯ ಮೂಲಕ ಹೊಸದಾಗಿ ನಡೆಸುವುದಾಗಿಯೂ ಹೇಳಿದೆ.

ಭೂಸ್ವಾಧೀನ ಸಂಬಂಧ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಜೂನ್‌ 20ರ ಗುರುವಾರ ನ್ಯಾಯಾಲಯಕ್ಕೆ ಸರ್ಕಾರವು ತನ್ನ ಹೇಳಿಕೆಗಳನ್ನು ಸಲ್ಲಿಸಿತು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ವಿಜು ಅಬ್ರಹಾಂ ಅವರು ಅರ್ಜಿಯನ್ನು ಇತ್ಯರ್ಥಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.