ನವದೆಹಲಿ: ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಪಂಜಾಬ್ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ.
'ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭಗವಂತ ಮಾನ್ ಜೀ ಅವರಿಗೆ ಅಭಿನಂದನೆಗಳು. ಪಂಜಾಬ್ ಅಭಿವೃದ್ಧಿ ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭಗತ್ ಸಿಂಗ್ ಗ್ರಾಮವಾದ ಖಟಕಡಕಲಾನ್‌ನಲ್ಲಿ ಭಗವಂತ ಮಾನ್ ಅವರು ಇಂದು (ಮಾ.16) ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರತಿಜ್ಞಾವಿಧಿ ಬೋಧಿಸಿದರು.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.