ADVERTISEMENT

ಚಳಿಗಾಲದ ಅಧಿವೇಶ: ಸಂಸದರ ಅಮಾನತು ಏಕಪಕ್ಷೀಯ ಎಂದ ಕಾಂಗ್ರೆಸ್ ಮುಖಂಡ ಶಶಿ ತರೂರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2023, 10:22 IST
Last Updated 19 ಡಿಸೆಂಬರ್ 2023, 10:22 IST
ಕಾಂಗ್ರೆಸ್ ನಾಯಕ ಶಶಿ ತರೂರ್
ಕಾಂಗ್ರೆಸ್ ನಾಯಕ ಶಶಿ ತರೂರ್   

ಬೆಂಗಳೂರು: ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ವಿರೋಧ ಪಕ್ಷಗಳ ಸಂಸದರನ್ನು ಅಮಾನತು ಮಾಡಿರುವುದನ್ನು ಕಾಂಗ್ರೆಸ್ ಸಂಸದ ಶಶಿ ತರೂರ್‌ ಖಂಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ ನನ್ನ 15 ವರ್ಷದ ಸಂಸದೀಯ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಫಲಕ ಹಿಡಿದು ಸದನದ ಬಾವಿಗೆ ಇಳಿದಿದ್ದೆ‘ ಎಂದು ಸಂಸತ್ತಿನಿಂದ ಅಮಾನತುಗೊಳ್ಳುವ ಮುನ್ನ ತರೂರ್‌ ಹೇಳಿದ್ದಾರೆ.

ಮುಂದುವರಿದು, ಅಧಿವೇಶನದಲ್ಲಿ ವಿರೋಧ ಪಕ್ಷಗಳ ಸಂಸದರನ್ನು ಅನ್ಯಾಯದ ಕ್ರಮದಿಂದ ಒಬ್ಬರನ್ನು ಅನರ್ಹಗೊಳಿಸುವುದನ್ನು ಅವರು ಗೌರವದ ಸಂಕೇತ ಎಂದು ಭಾವಿಸಿದ್ದಾರೇ? ಎಂದು ಕಿಡಿಕಾರಿದ್ದಾರೆ.

ADVERTISEMENT

ಸದನದಿಂದ ಹೊರಬಂದು ಮಾತನಾಡಿದ ತರೂರ್‌ ಅಮಾನತು ಕ್ರಮವನ್ನು ಏಕಪಕ್ಷೀಯ, ಅನ್ಯಾಯ ಹಾಗೂ ಸಂಸದೀಯ ಪ್ರಜಾಪ್ರಭುತ್ವದ ದ್ರೋಹ ಎಂದು ಆಕ್ರೋಶ ವ್ಯಕ್ತಡಿಸಿದ್ದಾರೆ.

ಡಿಸೆಂಬರ್‌ 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯಕ್ಕೆ ಸಂಬಂಧಂತೆ ಗೃಹ ಸಚಿವರು ಉತ್ತರ ನೀಡಬೇಕೆಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದರು. ವಿರೋಧ ಪಕ್ಷಗಳ ನಾಯಕರನ್ನು ಸ್ವೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ.

ಇದರೊಂದಿಗೆ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತು ಆದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.