ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಪತ್ನಿ ಅಮೃತಾ ಫಡಣವೀಸ್ ಅವರಿಗೆ ಕ್ರಿಮಿನಲ್ ಪ್ರಕರಣದಲ್ಲಿ ನೆರವಾಗುವಂತೆ ಲಂಚ ನೀಡಲು ಯತ್ನಿಸಿ, ಪರೋಕ್ಷ ಬೆದರಿಕೆಯೊಡ್ಡಿದ ಆರೋಪದಲ್ಲಿ ವಸ್ತ್ರ ವಿನ್ಯಾಸಕಿ ಅನಿಷ್ಕಾಳನ್ನು ಬಂಧಿಸಲಾಗಿದ್ದು, ಮಾ.21ರವರೆಗೆ ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅಮೃತಾ ಅವರು ನೀಡಿದ ದೂರು ಆಧರಿಸಿ, ವಸ್ತ್ರ ವಿನ್ಯಾಸಕಿ ಅನಿಷ್ಕಾ ಮತ್ತು ಆಕೆಯ ತಂದೆಯ ವಿರುದ್ಧ ಕಳೆದ ಫೆಬ್ರುವರಿ 20ರಂದು ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಆರೋಪಿಯನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಆರೋಪಿಯನ್ನು 7 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಪೊಲೀಸ್ ಪರ ವಕೀಲರು ವಾದಿಸಿದರು. ಬಳಿಕ ನ್ಯಾಯಾಲಯ ಆರೋಪಿಯನ್ನು ಮಾ.21ರವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿತು.
ಅನಿಷ್ಕಾ ಅವರನ್ನು 2021ರಲ್ಲಿ ಮೊದಲ ಸಲ ಭೇಟಿಯಾಗಿದ್ದಾಗಿ ಅಮೃತಾ ಫಡಣವೀಸ್ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.