ADVERTISEMENT

ಮುಂಬೈ: ಬಾಲ್ಕನಿ ಕುಸಿದು ಮಹಿಳೆ ಸಾವು, ಮೂವರಿಗೆ ಗಾಯ

ಪಿಟಿಐ
Published 20 ಜುಲೈ 2024, 14:31 IST
Last Updated 20 ಜುಲೈ 2024, 14:31 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಮುಂಬೈ: ದಕ್ಷಿಣ ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದು ಶನಿವಾರ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ರುಬಿನ್ನಿಸಾ ಮಂಜಿಲ್ ಕಟ್ಟಡವು, ಗ್ರಾಂಟ್ ರೋಡ್ ರೈಲು ನಿಲ್ದಾಣದ ಬಳಿಯ ಸ್ಲೀಟರ್ ರಸ್ತೆಯಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ADVERTISEMENT

‘ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲ್ಕನಿಯ ಕೆಲಭಾಗ ಕುಸಿದು ನಾಲ್ವರು ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಏಳು ಜನರನ್ನು ರಕ್ಷಿಸಲಾಗಿದೆ’ ಎಂದು  ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.