ಥಾಣೆ (ಮಹಾರಾಷ್ಟ್ರ): ₹15.46 ಲಕ್ಷ ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದು ಪರಾರಿಯಾಗಿದ್ದ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿವಾಹಿತ ಮಹಿಳೆಯ ಅತ್ತೆ, 2017ರ ಡಿಸೆಂಬರ್ 25ರಂದು ಪೊಲೀಸರಿಗೆ ದೂರು ದಾಖಲಿಸಿದ್ದರು. ‘ತನ್ನ ಸೊಸೆ ನೆರೆಹೊರೆಯವರೊಂದಿಗೆ ಸೇರಿ ಚಿನ್ನ ಮತ್ತು ನಗದನ್ನು ಕದ್ದು ಪರಾರಿಯಾಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಕೃತ್ಯ ಎಸಗಿದ ಬಳಿಕ ಆರೋಪಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡು, ಹೊಸ ಹೆಸರುಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದರು. ಕರ್ನಾಟಕದ ಗೋಕರ್ಣದಿಂದ ಗೋವಾ ಹಾಗೂ ಮಹಾರಾಷ್ಟ್ರ ಮುಂತಾದ ಸ್ಥಳಗಳಿಗೆ ತೆರಳುವ ಮೂಲಕ ಪೊಲೀಸರಿಂದ ತಪ್ಪಿಸಿಕೊಂಡಿದ್ದರು. ಆದರೆ, ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಆನಂದ್ ರಾವ್ರಾಣೆ ತಿಳಿಸಿದ್ದಾರೆ.
ಇವನ್ನೂ ಓದಿ: ಮೇಘಾಲಯ ಚುನಾವಣೆ: ಬಾಂಗ್ಲಾದೇಶ ಗಡಿ ಬಳಿ ನಗದು ವಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.