ADVERTISEMENT

ಅಚ್ಚರಿ! ಹೆಣ್ಣು ಮಗುವಿಗೆ ಜನ್ಮ ನೀಡಿದ 7 ತಿಂಗಳು ಕೋಮಾದಲ್ಲಿದ್ದ ಮಹಿಳೆ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2022, 12:43 IST
Last Updated 31 ಅಕ್ಟೋಬರ್ 2022, 12:43 IST
ಸಾಂಕೇಥಿಕ ಚಿತ್ರ
ಸಾಂಕೇಥಿಕ ಚಿತ್ರ   

ನವದೆಹಲಿ: ಏಳು ತಿಂಗಳಿನಿಂದ ಕೋಮಾದಲ್ಲಿರುವ ಮಹಿಳೆಯೊಬ್ಬರು ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

23 ವರ್ಷದ ಶಫಿಯಾ ಇಲ್ಲಿ ಏಮ್ಸ್‌ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ 7 ತಿಂಗಳ ಹಿಂದೆ ಶಫಿಯಾ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

ADVERTISEMENT

ಶಫಿಯಾಗೆ ಅಪಘಾತ ಸಂಭವಿಸಿದಾಗ ಅವರರು 40 ತಿಂಗಳ ಗರ್ಭಿಣಿಯಾಗಿದ್ದರು. ಅವರಿಗೆ ನಾರ್ಮಲ್‌ಡೆಲಿವರಿಯಾಗಿದ್ದು, ಮಗು ಆರೋಗ್ಯವಾಗಿದೆ ಆದರೆತಾಯಿ ಇನ್ನೂ ಕೋಮಾದಿಂದ ಹೊರಬಂದಿಲ್ಲ.

ಇಲ್ಲಿಯವರೆಗೂ ನಾಲ್ಕುಸಲ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.ಶಫಿಯಾಗೆ ಪ್ರಜ್ಞೆ ಮರಳುವ ಸಾಧ್ಯತೆ ಶೇ. 10ರಿಂದ 15ರಷ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.