ADVERTISEMENT

ಮಹಾರಾಷ್ಟ್ರ: ಲೇಡಿ ಸಿಂಗಂ ಖ್ಯಾತಿಯ ಆರ್‌ಎಫ್‌ಒ ದೀಪಾಲಿ ಚವ್ಹಾಣ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 11:18 IST
Last Updated 27 ಮಾರ್ಚ್ 2021, 11:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಮರಾವತಿ: ಮಹಾರಾಷ್ಟ್ರದ ಲೇಡಿ ಸಿಂಗಂ ಖ್ಯಾತಿಯ ಮೆಲ್ಗಾಟ್‌ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಯಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾಲಿ ಚವ್ಹಾಣ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಮರಾವತಿ ಜಿಲ್ಲೆಯ ಹರಿಸಾಲ್‌ದಲ್ಲಿರುವ ತಮ್ಮ ನಿವಾಸದಲ್ಲಿ ಸರ್ವೀಸ್ ರಿವಾಲ್ವಾರ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಲ್ಘಾಟ್‌ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಗೊಗಮಾಲ್‌ ಅರಣ್ಯ ವಲಯದ ಅರಿಸಾಲ್‌ನಲ್ಲಿ ವಲಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಅವರು ಏತಕ್ಕಾಗಿ ಇಂಥ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಯುತ್ತಿಲ್ಲ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಧರಣಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.