ನವದೆಹಲಿ:ಅಯ್ಯಪ್ಪ ಸ್ವಾಮಿ ದೇವಾಲಯಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್‌ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು(ಮಂಗಳವಾರ) ಮಧ್ಯಾಹ್ನ 3ಗಂಟೆಗೆ ನಡೆಸಲಿದೆ.
ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರಾಕರಿಸಿದ್ದ ದೇವಾಲಯ ಆಡಳಿತ ಮಂಡಳಿಯ ನಿಲುವನ್ನು ತಿರಸ್ಕರಿಸಿದ್ದ ಸುಪ್ರೀಂಕೋರ್ಟ್‌ಈ ಸಂಬಂಧ ಸೆಪ್ಟೆಂಬರ್ 28ರಂದು ತೀರ್ಪು ನೀಡಿತ್ತು. ‘ದೇವಾಲಯ ಸ್ಥಾಪಿಸಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿದ ಮೇಲೆ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾರ ಮೇಲೂ ನಿರ್ಬಂಧ ವಿಧಿಸುವಂತಿಲ್ಲ’ ಎಂದು ಸೂಚಿಸಿತ್ತು. ಈತೀರ್ಪು ವಿರೋಧಿಸಿ ಕೇರಳದಾದ್ಯಂತ ನಡೆದಿದ್ದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು.
ಸದ್ಯ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ 49 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಎ.ಎಂ. ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರ ಅವರ ಪೀಠ ಕೈಗೆತ್ತಿಕೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.