ನವದೆಹಲಿ: ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿರುವ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ದೊರಕಬೇಕು ಎಂದು ಕಾಂಗ್ರೆಸ್ ಹೇಳಿದೆ.
ಕುಸ್ತಿಪಟುಗಳಿಗೆ ಬೆಂಬಲ ನೀಡಿ ಖಾಪ್ ಸದಸ್ಯರು ಮತ್ತು ರೈತರು ರೊಹ್ಟಕ್–ದೆಹಲಿ ರಾಷ್ಟ್ರೀಯ ಹೆದ್ದಾರಿಯನ್ನು ಎರಡು ಗಂಟೆಗಳ ಕಾಲ ತಡೆದ ಬೆನ್ನಲ್ಲೇ ಕಾಂಗ್ರೆಸ್ ಈ ಹೇಳಿಕೆ ನೀಡಿದೆ.
‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪದೇ ಪದೇ ಹೆಣ್ಣುಮಕ್ಕಳ ವಿರುದ್ಧ ದೌರ್ಜನ್ಯ ನಡೆಸಿದವರ ಪರವಾಗಿ ನಿಲ್ಲುತ್ತಿದೆ. ದೇಶದ ಹೆಣ್ಣುಮಕ್ಕಳು ನ್ಯಾಯಕ್ಕಾಗಿ ಹೋರಾಡುತ್ತಿದ್ದರೆ, ಮೋದಿ ಸರ್ಕಾರ, ಸಚಿವರು ಸೇರಿದಂತೆ ಇಡೀ ಆಡಳಿತ ವರ್ಗ ಕಿರುಕುಳ ನೀಡಿದವರ ಪರವಾಗಿ ನಿಂತಿದೆ. ಮಹಿಳಾ ಕುಸ್ತಿಪಟುಗಳ ನ್ಯಾಯಸಮ್ಮತ ಬೇಡಿಕೆಯನ್ನು ಕಡೆಗಣಿಸುತ್ತಿದೆ’ ಎಂದು ಎಐಸಿಸಿ ಕಾರ್ಯದರ್ಶಿ ವಿನೀತ್ ಪುನಿಯಾ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.