ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸ್ಥಾನಗಳನ್ನು ಒದಗಿಸುವ ಮಹಿಳಾ ಮೀಸಲು ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾದ ಬೆನ್ನಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಂಸತ್ತಿನಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಎಲ್ಲಾ ಹೆಣ್ಣುಮಕ್ಕಳನ್ನು ಅಭಿನಂದಿಸುತ್ತೇನೆ. ಸೆಪ್ಟೆಂಬರ್ 21 ಮತ್ತು 22ರಂದು ಹೊಸ ಇತಿಹಾಸವನ್ನು ರಚಿಸಿದ್ದೇವೆ. ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ಇದು ನವ ಭಾರತದ ಹೊಸ ಶಕ್ತಿ ಎಂದು ಮೋದಿ ಹೇಳಿದರು.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿಯವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಮಹಿಳಾ ಸಂಸದರು ಅದ್ದೂರಿ ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಅಮಿತ್ ಶಾ ಸೇರಿದಂತೆ ಹಿರಿಯ ಮುಖಂಡರು, ಕೇಂದ್ರ ಸಚಿವರು ಹಾಗೂ ಮಹಿಳೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.