ADVERTISEMENT

ಮಹಾರಾಷ್ಟ್ರದ ಏಳಿಗೆಗಾಗಿ ವಯಸ್ಸು ಲೆಕ್ಕಿಸದೇ ಶ್ರಮಿಸುವೆ: ಶರದ್ ಪವಾರ್

ಪಿಟಿಐ
Published 15 ಅಕ್ಟೋಬರ್ 2024, 13:51 IST
Last Updated 15 ಅಕ್ಟೋಬರ್ 2024, 13:51 IST
ಶರದ್ ಪವಾರ್
ಶರದ್ ಪವಾರ್   

ಪುಣೆ: ಏಕನಾಥ ಶಿಂದೆ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರದ ಏಳಿಗೆಗಾಗಿ ವಯಸ್ಸು ಲೆಕ್ಕಿಸದೇ ಶ್ರಮಿಸುತ್ತೇನೆ ಎಂದು ಗುಡುಗಿದ್ದಾರೆ.

ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಯಸ್ಸು 84 ಅಥವಾ 90 ಆಗಿರಲಿ ರಾಜ್ಯವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯಲು ಅವಿರತವಾಗಿ ಶ್ರಮಿಸುತ್ತೇನೆ, ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರದಲ್ಲಿ ತೊಡಗಿರುವ ಏಕನಾಥ ಶಿಂದೆ ಸರ್ಕಾರವನ್ನು ಅಧಿಕಾರಿದಿಂದ ಕೆಳಗಿಸಲು ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷಕ್ಕೆ (ಎನ್‌ಪಿ) ಸಹಕಾರ ನೀಡುವಂತೆ ಕೋರಿದ್ದಾರೆ.

ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಾಗ ಬಳಿಕ ಕಾರ್ಯದಲ್ಲೂ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಟೀಕಿಸಿದ್ದಾರೆ.

ADVERTISEMENT

ಮಹಾರಾಷ್ಟ್ರವನ್ನು ಉತ್ತಮ ರಾಜ್ಯವನ್ನಾಗಿಸಲು ಹಾಗೂ ಅಭಿವೃದ್ಧಿಪಥದತ್ತ ಕೊಂಡೊಯ್ಯಲು ನಮ್ಮ ಪಕ್ಷ ಬದ್ಧವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗುತ್ತೇವೆ. ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಿಮ್ಮ ಕೈಯಲಿದೆ ಎಂದು ಶರದ್ ಹೇಳಿದ್ದಾರೆ.

288 ಸದಸ್ಯ ಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.