ಲಖನೌ: ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.
ಕೋವಿಡ್–19 ಹಿನ್ನೆಲೆಯಲ್ಲಿಎನ್‌ಪಿಆರ್‌ಪರಿಷ್ಕರಣೆಯನ್ನು ಮಾರ್ಚ್ 25ರಂದೇ ಕೇಂದ್ರ ಸರ್ಕಾರ ಮುಂದೂಡಿತ್ತು.2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿತ್ತು.ಕೊವಿಡ್–19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು.
ಇದನ್ನೂ ಓದಿ:ಕೊರೊನಾ ಪರಿಣಾಮ: ಎನ್‌ಪಿಆರ್ ಪರಿಷ್ಕರಣೆ ಮುಂದೂಡಿದ ಕೇಂದ್ರ ಸರ್ಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.