ಮುಂಬೈ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ಕುಸ್ತಿಪಟುಗಳ ಬೇಡಿಕೆಗಳನ್ನೆಲ್ಲ ನಾವು ಪರಿಗಣಿಸುತ್ತಿದ್ದೇವೆ. ದೆಹಲಿ ಪೊಲೀಸ್ ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವವರಿಗೆ ನಾನು ಹೇಳಲು ಬಯಸುವುದೇನೆಂದರೆ ಕಾನೂನು ಎಲ್ಲರಿಗೂ ಸಮಾನವಾಗಿದೆ. ಎಲ್ಲ ಆಟಗಾರರು ನಮಗೆ ಮುಖ್ಯ ಎಂದು ಹೇಳಿದ್ದಾರೆ.
ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಇಂದು 'ಮಹಾಪಂಚಾಯತ್' ಹಮ್ಮಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.