ನಾಗ್ಪುರ: ದಾರ್ಶನಿಕ ಜ್ಞಾನೇಶ್ವರ ಅವರಂತಹ ಸಂತ ಕವಿಗಳ ಕೃತಿಗಳನ್ನು ಎಲ್ಲ ಭಾಷೆಗಳಿಗೂ ಅನುವಾದಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಹೇಳಿದರು.
ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಮಧುಸೂದನ್ ಪೆನ್ನಾ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂತ ಜ್ಞಾನೇಶ್ವರ ಅವರ ಕೃತಿ ‘ಜ್ಞಾನೇಶ್ವರಿ’ಯನ್ನು ಸಂಸ್ಕೃತಕ್ಕೆ ಅನುವಾದಿಸಿದ ಕಾರಣಕ್ಕೆ ಡಾ.ಮಧುಸೂದನ್ ಅವರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.