ADVERTISEMENT

ಯಾವ ರಾಜಕೀಯ ಪಕ್ಷಕ್ಕೂ ಸೇರುವುದಿಲ್ಲ: ಯಶವಂತ ಸಿನ್ಹಾ

ರಾಷ್ಟ್ರಪತಿ ಚುನಾವಣೆಯಲ್ಲಿ ಸೋತ ಬಳಿಕ ಸಿನ್ಹಾ ಪತ್ರಿಕ್ರಿಯೆ

ಪಿಟಿಐ
Published 26 ಜುಲೈ 2022, 10:33 IST
Last Updated 26 ಜುಲೈ 2022, 10:33 IST
ಯಶವಂತ ಸಿನ್ಹಾ
ಯಶವಂತ ಸಿನ್ಹಾ   

ಕೋಲ್ಕತ್ತ: ವಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಪರಾಭವಗೊಂಡ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಅವರು, ‘ನಾನು ಯಾವುದೇ ರಾಜಕೀಯ ಪಕ್ಷ ಸೇರ್ಪಡೆಯಾಗುವುದಿಲ್ಲ, ಸ್ವತಂತ್ರ ಅಭ್ಯರ್ಥಿಯಾಗಿಯೇ ಉಳಿಯುತ್ತೇನೆ’ ಎಂದು ಮಂಗಳವಾರ ತಿಳಿಸಿದ್ದಾರೆ.

‘ನನಗೀಗ 84 ವರ್ಷ. ಸಾರ್ವಜನಿಕ ಜೀವನದಲ್ಲಿ ನನ್ನ ಪಾತ್ರ ಏನು ಎಂಬ ಬಗ್ಗೆ ಇನ್ನಷ್ಟೇ ನಿರ್ಧಾರ ಮಾಡಬೇಕಿದೆ’ ಎಂದು ತಿಳಿಸಿದ್ದಾರೆ. ಟಿಎಂಸಿಯೊಂದಿಗೆ ಸಂಪರ್ಕದಲ್ಲಿದ್ದೀರ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾರೂ ನನ್ನೊಂದಿಗೆ ಮಾತನಾಡಿಲ್ಲ, ನಾನೂ ಯಾರೊಂದಿಗೂ ಮಾತನಾಡಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಕಟು ಟೀಕಾಕಾರರಾಗಿದ್ದ ಸಿನ್ಹಾ ಅವರು 2021ರಲ್ಲಿ ಟಿಎಂಸಿ ಸೇರಿದ್ದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.