ನವದೆಹಲಿ: ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸು ಒದಗಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡ ಹಾಗೂ ನಿಷೇಧಿತ ಜೆಕೆಎಲ್‌ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ತಿಹಾರ್ ಜೈಲಿನಲ್ಲಿ ಉಪವಾಸ ಆರಂಭಿಸಿದ್ದಾರೆ ಎಂದು ಜೈಲಿನ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಯಾಸಿನ್ ಮಲಿಕ್ ಅವರ ಉಪವಾಸ ಸತ್ಯಾಗ್ರಹದ ಕಾರಣ ಕುರಿತಂತೆ ಪ್ರತಿಕ್ರಿಯಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ನನ್ನ ವಿಚಾರಣೆ ನ್ಯಾಯಯುತ ಮಾರ್ಗದಲ್ಲಿ ನಡೆದಿಲ್ಲ ಎಂದು ಯಾಸಿನ್ ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಿಗ್ಗೆಯಿಂದ ಯಾಸಿನ್ ಮಲಿಕ್ ಉಪವಾಸ ಆರಂಭಿಸಿದ್ದಾರೆ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಮಲಿಕ್‌ಗೆ ಭಯೋತ್ಪಾದನಾ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಮೇ ತಿಂಗಳಲ್ಲಿ ದೆಹಲಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು.
ಭಾರೀ ಭದ್ರತೆಯಲ್ಲಿ ಮಲಿಕ್ ಅವರನ್ನು ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದೆ.
2017 ರಲ್ಲಿ ಭಯೋತ್ಪಾದನೆಗೆಹಣದ ನೆರವು ನೀಡಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಅವರನ್ನು 2019 ರ ಆರಂಭದಲ್ಲಿ ಬಂಧಿಸಲಾಗಿತ್ತು. .
ಇದನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.